Sunday, December 22, 2024
Homeತಾಜಾ ಸುದ್ದಿBest Mileage CNG Cars: 2023ರಲ್ಲಿ ಬಿಡುಗಡೆಯಾದ ಬೆಸ್ಟ್ ಮೈಲೇಜ್ ಸಿಎನ್​ಜಿ ಕಾರುಗಳಿವು!

Best Mileage CNG Cars: 2023ರಲ್ಲಿ ಬಿಡುಗಡೆಯಾದ ಬೆಸ್ಟ್ ಮೈಲೇಜ್ ಸಿಎನ್​ಜಿ ಕಾರುಗಳಿವು!

ಸಿಎನ್​ಜಿ ಕಾರುಗಳ ಮಾರಾಟವು ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಉತ್ಪಾದನಾ ಕಂಪನಿಗಳು ಹಲವಾರು ಹೊಸ ಕಾರು ಮಾದರಿಗಳಲ್ಲಿ ಇದೀಗ ಸಿಎನ್​ಜಿ ಆವೃತ್ತಿಗಳನ್ನು ಮಾರಾಟ ಮಾಡುತ್ತಿವೆ.

ದುಬಾರಿ ಇಂಧನ ದರ ಮತ್ತು ನಿರ್ವಹಣಾ ವೆಚ್ಚ ಹೆಚ್ಚಳ ಪರಿಣಾಮ ಹೊಸ ಕಾರುಗಳ (New Cars) ಖರೀದಿದಾರರು ಪೆಟ್ರೋಲ್ ಮತ್ತು ಡೀಸೆಲ್ ಕಾರು ಮಾದರಿಗಳಿಗೆ ಪರ್ಯಾಯವಾಗಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ (Electric) ಮತ್ತು ಸಿಎನ್ ಜಿ (CNG) ಕಾರುಗಳನ್ನು ಖರೀದಿಸುತ್ತಿದ್ದಾರೆ. ಪರಿಸರ ಸ್ನೇಹಿ ಕಾರುಗಳಲ್ಲಿ ಎಲೆಕ್ಟ್ರಿಕ್ ಮಾದರಿಗಳಿಗೆ ಸದ್ಯ ಉತ್ತಮ ಬೇಡಿಕೆಯಿದ್ದರೂ ಬೆಲೆ ತುಸು ದುಬಾರಿಯಾಗಿದ್ದು, ದುಬಾರಿ ಬೆಲೆ ಹಿನ್ನಲೆ ಹಲವು ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಸಿಎನ್​ಜಿ ಮಾದರಿಗಳನ್ನು ಆಯ್ಕೆ ಮಾಡುತ್ತಿದ್ದಾರೆ. ಸಿಎನ್ ಜಿ ಕಾರುಗಳು ಸದ್ಯ ಎಂಟ್ರಿ ಲೆವಲ್ ಕಾರುಗಳಲ್ಲಿ ಮಾತ್ರವಲ್ಲದೆ ಮಧ್ಯಮ ಗಾತ್ರದ ಎಸ್ ಯುವಿ ಮತ್ತು ಎಂಪಿವಿ ಕಾರುಗಳಲ್ಲೂ ಸಹ ಮಾರಾಟಗೊಳ್ಳುತ್ತಿದ್ದು, ಈ ವರ್ಷ ಬಿಡುಗಡೆಯಾದ ಅತ್ಯುತ್ತಮ ಇಂಧನ ದಕ್ಷತೆ ಹೊಂದಿರುವ ಸಿಎನ್​ಜಿ ಮಾದರಿಗಳ ಮಾಹಿತಿ ಇಲ್ಲಿದೆ.

ಹ್ಯುಂಡೈ ಎಕ್ಸ್ಟರ್ 

ಮೈಕ್ರೊ ಎಸ್ ಯುವಿ ವೈಶಿಷ್ಟ್ಯತೆಯ ಹ್ಯುಂಡೈ ಎಕ್ಸ್ ಟರ್ ಕಾರು ಮಾದರಿಯು ಸಿಎನ್‌ಜಿ ಆಯ್ಕೆ ಹೊಂದಿರುವ ಪ್ರಮುಖ ಕಾರು ಮಾದರಿಗಳಲ್ಲಿ ಒಂದಾಗಿದ್ದು, ಎಕ್ಸ್ ಟರ್ ಸಿಎನ್ ಜಿ ಮಾದರಿಯು 1.2 ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಫ್ಯಾಕ್ಟರಿ ಫಿಟೆಡ್ ಸಿಎನ್ ಜಿ ಕಿಟ್ ಹೊಂದಿದೆ. ಇದು 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಪ್ರತಿ ಕೆಜಿ ಸಿಎನ್ ಜಿಗೆ 27 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಎಕ್ಸ್ ಶೋರೂಂ ಪ್ರಕಾರ ರೂ. 8.34 ಲಕ್ಷದಿಂದ ರೂ. 9.06 ಲಕ್ಷ ಬೆಲೆ ಹೊಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments