Hardik Pandya: ಗಾಯದ ಕಾರಣ ಹಾರ್ದಿಕ್ ಪಾಂಡ್ಯ ಐಪಿಎಲ್ ಆಡುವುದು ಅನುಮಾನ ಎನ್ನಲಾಗಿತ್ತು. ಆದರೆ ಈ ಸುದ್ದಿ ವೈರಲ್ ಆದ ಬೆನ್ನಲ್ಲೇ ಪಾಂಡ್ಯ ಅಫ್ಘಾನಿಸ್ತಾನ್ ವಿರುದ್ಧದ ಸರಣಿ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ ಎಂಬ ಮಾಹಿತಿ ಹೊರಹೊಬಿದ್ದಿದೆ. ಹೀಗಾಗಿ ಈ ಬಾರಿಯ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಅವರೇ ಮುನ್ನಡೆಸಲಿದ್ದಾರೆ.
ಟೀಮ್ ಇಂಡಿಯಾ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಮುಂಬರುವ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಏಕದಿನ ವಿಶ್ವಕಪ್ನಲ್ಲಿ ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ವೇಳೆ ಪಾಂಡ್ಯ ಮೊಣಕಾಲಿನ ನೋವಿಗೆ ತುತ್ತಾಗಿದ್ದರು. ಇದೇ ಕಾರಣದಿಂದಾಗಿ ಅವರು ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ.
ಇದೀಗ ಹಾರ್ದಿಕ್ ಪಾಂಡ್ಯ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಅಫ್ಘಾನಿಸ್ತಾನ್ ವಿರುದ್ಧದ ಸರಣಿ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಐಪಿಎಲ್ ಆರಂಭಕ್ಕೂ ಮುನ್ನ ಪಾಂಡ್ಯ ಮತ್ತೆ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.
ಇನ್ನು ಜನವರಿಯಲ್ಲಿ ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಕಣಕ್ಕಿಳಿದರೆ ಐಪಿಎಲ್ನಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಮುಂಬೈ ಇಂಡಿಯನ್ಸ್ ತಂಡವನ್ನು ಈ ಬಾರಿ ಪಾಂಡ್ಯ ಅವರೇ ಮುನ್ನಡೆಸಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಮುಂಬೈ ಇಂಡಿಯನ್ಸ್ ತಂಡಕ್ಕೂ ಪಾಂಡ್ಯ ಕ್ಯಾಪ್ಟನ್:
ಇದಕ್ಕೂ ಮುನ್ನ ಗಾಯದ ಕಾರಣ ಹಾರ್ದಿಕ್ ಪಾಂಡ್ಯ ಐಪಿಎಲ್ ಆಡುವುದು ಅನುಮಾನ ಎನ್ನಲಾಗಿತ್ತು. ಆದರೆ ಈ ಸುದ್ದಿ ವೈರಲ್ ಆದ ಬೆನ್ನಲ್ಲೇ ಪಾಂಡ್ಯ ಅಫ್ಘಾನಿಸ್ತಾನ್ ವಿರುದ್ಧದ ಸರಣಿ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ ಎಂಬ ಮಾಹಿತಿ ಹೊರಹೊಬಿದ್ದಿದೆ. ಹೀಗಾಗಿ ಈ ಬಾರಿಯ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಅವರೇ ಮುನ್ನಡೆಸಲಿದ್ದಾರೆ ಎನ್ನಬಹುದು.
ಅತ್ತ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಕಾಣಿಸಿಕೊಂಡರೆ ರೋಹಿತ್ ಶರ್ಮಾ ಕೇವಲ ಬ್ಯಾಟರ್ ಆಗಿ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಹೀಗಾಗಿ ಈ ಬಾರಿ ಮುಂಬೈ ಇಂಡಿಯನ್ಸ್ ತಂಡದ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಮುಂಬೈ ಇಂಡಿಯನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ) ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಎನ್. ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜೇಸನ್ ಬೆಹ್ರೆಂಡಾರ್ಫ್ ,ರೊಮಾರಿಯೋ ಶೆಫರ್ಡ್, ರೊಮಾರಿಯೋ ಶೆಫರ್ಡ್. ಜೆರಾಲ್ಡ್ ಕೋಟ್ಝಿ , ದಿಲ್ಶನ್ ಮಧುಶಂಕ , ಶ್ರೇಯಸ್ ಗೋಪಾಲ್ , ನುವಾನ್ ತುಷಾರ , ನಮನ್ ಧೀರ್ , ಅನ್ಶುಲ್ ಕಾಂಬೋಜ್ , ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ.